ಜಿಲ್ಲಾ ಸುದ್ದಿಮೈಸೂರು

ಮೈಸೂರು : ಕಾಡಾನೆಯನ್ನ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಮೈಸೂರು : ಯಾರೋ ದುಷ್ಕರ್ಮಿಗಳು ನಾಡ ಬಂದೂಕಿನಿಂದ ಗುಂಡು ಹಾರಿಸಿ ಕಾಡಾನೆಯನ್ನು ಕೊಂದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಸುಳಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಮಾರು 20 ವರ್ಷದ ಹೆಣ್ಣಾನೆ ಮೃತಪಟ್ಟಿದೆ.

ಕಾಡಂಚಿನ ಗ್ರಾಮಗಳಾದ ಕೋಗಿಲವಾಡಿ, ಸುಳಗೋಡು, ಕಾಳತಿಮ್ಮನಹಳ್ಳಿ ಇತ್ಯಾದಿ ಗ್ರಾಮಗಳಲ್ಲಿ ಪ್ರತಿನಿತ್ಯ ಆನೆಗಳ ಹಾವಳಿ ಹೆಚ್ಚಾಗಿದೆ. ರೈತರು ಬೆಳೆದ ಬೆಳೆಗಳನ್ನು ಆನೆಗಳ ಹಿಂಡು ನಾಶಪಡಿಸುತ್ತಿದ್ದು ಸ್ಥಳೀಯರು ಅನೇಕ ಬಾರಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ ಆದರೂ ಯಾವುದೇ ಕ್ರಮ ಕೈಗೊಂಡಿಲ್ಲಾ.

ಅರಣ್ಯ ಇಲಾಖೆ ಸಿಬ್ಬಂದಿ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಆನೆಗಳ ಹಿಂಡು ಜಮೀನಿಗೆ ಲಗ್ಗೆ ಇಟ್ಟಿದ್ದನ್ನ ತಡೆಯಲು ಹೋದ ರೈತರ ಮೇಲೆ ದಾಳಿ ಮಾಡಲು ಯತ್ನಿಸಿರುವ ಆನೆಗಳ ಹಿಂಡಿನ ಮೇಲೆ ಯಾರೋ ಅಪರಿಚಿತರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button