ಕಲಬುರಗಿ: ಮಕ್ಕಳಿಗೆ ಸುಟ್ಟು ತಾನೂ ಬೆಂಕಿ ಹಚ್ಚಿಕೊಂಡು ಗೃಹಣಿ ಆತ್ಮಹತ್ಯೆ

ಕಲಬುರಗಿ: ತವರು ಮನೆಗೆ ಕಳಿಸಲಿಲ್ಲ ಅನ್ನೋ ಕಾರಣಕ್ಕೆ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾಯಿಯೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಇಲ್ಲಿನ ಪಂಚಶೀಲ ನಗರದಲ್ಲಿ ನಡೆದಿದೆ.
ಘಟನೆಯಲ್ಲಿ ತಾಯಿ ದೀಕ್ಷಾ ವಸಂತ ಶರ್ಮಾ 26, ಮಗಳು ಸಿಂಚನಾ 2, ಇಬ್ಬರು ಸಾವನ್ನಪ್ಪಿದ್ದಾರೆ. ಮೂರು ವರ್ಷದ ಮಗ ಧನಂಜಯಗೆ ಸುಟ್ಟು ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ. ಮೂಲತಃ ಕಾಳಗಿ ತಾಲೂಕಿನ ದೀಕ್ಷಾ ಅವರನ್ನು ಇಲ್ಲಿನ ಪಂಚಶೀಲ ನಗರದ ವಸಂತ ಶರ್ಮಾಗೆ ಐದು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಆದರೆ, ದೀಕ್ಷಾಗೆ ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಮತ್ತು ತವರು ಮನೆಗೆ ಕಳುಹಿಸುತ್ತಿರಲಿಲ್ಲ ಎನ್ನಲಾಗಿದೆ.
ನಿನ್ನೆ ಕೂಡ ತವರು ಮನೆಗೆ ಹೋಗಲು ತಯಾರಾದಾಗ ಗಂಡನ ಮನೆಯಲ್ಲಿ ಅವಕಾಶ ನೀಡಲಿಲ್ವಂತೆ, ಇದೆ ಕಾರಣಕ್ಕೆ ನಿನ್ನೆ ಮದ್ಯಾನ ತನ್ನ ಇಬ್ಬರು ಮಕ್ಕಳೊಂದಿಗೆ ಮನೆಯಲ್ಲೇ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಮಕ್ಕಳು ತಪ್ಪಿಸಿಕೊಳ್ಳಲು ಯತ್ನಿಸಿದರೂ ಬಿಡದೆ ಆಟಿಕೆ ವಸ್ತುಗಳಿಗೆ ಕಟ್ಟಿ ಹಾಕಿ ಬೆಂಕಿ ಹಚ್ಚಿದ್ದಾಳೆ. ಗಂಡನ ಮನೆಯವರೇ ಬೆಂಕಿಹಚ್ಚಿ ಕೊಲೆ ಮಾಡಿದ್ದಾರೆ ಎಂದು ದೀಕ್ಷಾ ಕುಟುಂಬದವರು ಆರೋಪಿಸಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರೀಶಿಲನೆ ಮಾಡಿದ್ದಾರೆ. ಈ ಕುರಿತು ಸ್ಪೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸತ್ತಿದ್ದಾರೆ.
ಮೊನ್ನೆ ಶೆನಿವಾರ ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿ ಇಂತಹದೆ ಹೃದಯವಿದ್ರಾವಕ ಘಟನೆ ನಡೆದಿತ್ತು. ಇಬ್ಬರು ಮಕ್ಕಳೊಂದಿಗೆ ಗೃಹಣಿ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡೊಕೊಂಡಿದ್ದಳು. ಅವತ್ತೇ ಶಹಬಾದ ಪಟ್ಟಣದಲ್ಲಿ ನದಿಗೆ ಜಿಗಿದು ಆರು ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಘಟನೆಗಳು ಮಾಸುವ ಮುನ್ನವೇ ಇದೀಗ ಮತ್ತೊಂದು ಘಟನೆ ಮರುಕಳಿಸಿದ್ದು ಜನ ದಂಗಾಗುವಂತೆ ಮಾಡಿದೆ.



