ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ
ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವಕ ಸಾವು

ಹುಬ್ಬಳ್ಳಿ: ಕೃಷಿ ಹೊಂಡಕ್ಕೆ ಈಜಲು ಹೋಗಿ ಯುವಕನೊಬ್ಬ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಸರಹದ್ದಿನ ಜಮೀನಿನಲ್ಲಿ ನಡೆದಿದೆ.
ಸೌದಿಮಠ ( 21 ) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಶಿವಪ್ಪ ಎಂಬುವರ ಹೊಲದ ಸೌದಿಮಠ ಯುವಕ ಈಜಲು ತೆರಳಿದ್ದಾನೆ. ಆದರೆ ನೀರಿನ ಆಳಕ್ಕೆ ಹೋದಾಗ ಮತ್ತೆ ಮೇಲೆ ಬರಲಾಗದೆ, ನೀರಿನಲ್ಲಿಯೇ ಸಾವನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ.
ಇನ್ನೂ ಕೃಷಿ ಹೊಡದ ಬಳಿ ಯುವಕನ ಬಟ್ಟೆಗಳನ್ನು ನೋಡಿದ ದಾರಿ ಹೋಗುವವರು ಯುವಕನ ಬಟ್ಟೆ ನೋಡಿ, ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ, ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನ ಮೃತ ದೇಹವನ್ನು ಸ್ಥಳಿಯರ ಸಹಾಯದೊಂದಿಗೆ ಹೊರತೆಗೆದು, ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




