ಬಾಗಲಕೋಟೆ

ಆರ್​ಟಿಐ ಕಾರ್ಯಕರ್ತ ಕೊಲೆ ಕೇಸ್ ಸಿಬಿಐಗೆ ವಹಿಸಲು ಕರವೇ ಶಿವರಾಮೇಗೌಡ ಬಣ ಆಗ್ರಹ

ಬಾಗಲಕೋಟೆ: ಮಾಹಿತಿ ಹಕ್ಕು ಕಾರ್ಯಕರ್ತ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬಾಗಲಕೋಟೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.

ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಬಿ ಎಂ ಪಾಟೀಲ್, ರಾಜ್ಯದಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ, ಹೋರಾಟಗಾರ ಮೇಲೆ ಹಲ್ಲೆ ಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದು ಕಳವಳಕಾರಿ ಸಂಗತಿ. ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಟಿ ಶ್ರೀಧರ್ ಬರ್ಬರ ಹತ್ಯೆ ಪ್ರಕರಣ ಮಾಸುವ ಮುನ್ನವೇ ರಾಮನಗರ ಜಿಲ್ಲೆ ತಾವರಕೆರೆ ಪೊಲೀಸ್ ಠಾಣೆಯಲ್ಲಿ ಆರ್ ವೆಂಕಟೇಶ್ ಮಾಹಿತಿ ಹಕ್ಕು ಕಾರ್ಯಕರ್ತ ಮೇಲೆ ಅಮಾನುಷವಾಗಿ ಕೈಕಾಲು ಕತ್ತರಿಸಿದ ಪರಿಣಾಮ ಮೃತಪಟ್ಟಿದ್ದರು. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಮಾಹಿತಿ ಹಕ್ಕು ಕಾರ್ಯಕರ್ತರು ಪ್ರಶ್ನಿಸಿದರೆ ಹತ್ಯೆಯಂತಹ ಕ್ರೂರ ಪ್ರಕರಣ ನಡೆದಿವೆ. ಇದರ ಹಿಂದೆ ಕಾಣದ ಕೈಗಳಿವೆ.ಅವರನ್ನು ಪತ್ತೆ ಹಚ್ಚಬೇಕು. ಇನ್ನು ಹತ್ಯೆ ಪ್ರಕರಣದಲ್ಲಿ 8 ಜನರ ಬಂಧನವಾಗಿದೆ. ಅವರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿದರು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಸಲ್ಲಿಸಿದರು.ಇದೇ ವೇಳೆ ಕರವೇ ಕಾರ್ಯಕರ್ತರು ಭಾಗಿಯಾಗಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button