ಬಾಗಲಕೋಟೆ

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕ್ವಿಟ್ ಇಂಡಿಯಾ ಚಳುವಳಿ ದಿನಾಚರಣೆ

ಬಾಗಲಕೋಟೆ: ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳುವಳಿಯ ದಿನಾಚರಣೆಯನ್ನು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರಿಗೆ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭಾಂಗಣದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್ ಜಿ ನಂಜಯ್ಯನಮಠ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಮಹಾತ್ಮ ಗಾಂಧೀಜಿ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕ್ವಿಟ್ ಇಂಡಿಯಾ ಚಳುವಳಿ ಬಗ್ಗೆ ಚಂದ್ರಶೇಖರ ರಾಠೋಡ್ ಮಾತನಾಡಿದರು.

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿಯು ಜಿಲ್ಲೆಯ ಎಲ್ಲಾ ಬ್ಲಾಕ್ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮೆರವಣಿಗೆ ರದ್ದುಪಡಿಸಿ,ಕೇವಲ ಕಚೇರಿಯಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕ್ವಿಟ್ ಇಂಡಿಯಾ ಚಳುವಳಿ ಬಗ್ಗೆ ಜಾಗೃತಿ ಮೂಡಿಸಿಲಾಯಿತು, ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ದರು.ಕೆಲವು ಮಹಿಳಾ, ಹಾಗೂ ಕಾರ್ಯಕರ್ತರು ಬಿಳಿ ಬಟ್ಟೆ, ಮಹಿಳೆಯರು ಸೀರೆ , ಪುರುಷರು ಗಾಂಧಿ ಟೋಪಿ ಹಾಕಿಕೊಂಡು ಗಮನ ಸೆಳೆದರು. ಇನ್ನು ಕಾರ್ಯಕ್ರಮಕ್ಕೆ ವಿವಿಧ ಸಂಘಟನೆಗಳು ಸಾಥ್ ನೀಡಿದ್ದರು. ಮಾಜಿ ಸಚಿವ ಎಚ್ ವೈ ಮೇಟಿ,ಮಹಿಳಾ ಕಾರ್ಯಕರ್ತರು, ವಿವಿಧ ಘಟಕಗಳ ಕಾರ್ಯಕರ್ತರು ಭಾಗಿಯಾಗಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button