ಬೆಂಗಳೂರು ಗ್ರಾಮಾಂತರ

ಎತ್ತಿನಹೊಳೆ ಯೋಜನೆ ಶೀಘ್ರ ಪೂರ್ಣಗೊಳಿಸಲು ಸಿಎಂಗೆ ಮನವಿ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಅನಿಯಮಿತ ಮಳೆಯಿಂದ ಸತತವಾಗಿ ನೀರಿನ ಅಭಾವ ಎದುರಿಸುತ್ತಿದ್ದು ಎತ್ತಿನ ಹೊಳೆ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಬೆಂಗಳೂರು ಗ್ರಾಮಾಂತರ ಭಾಗದಲ್ಲಿನ ನೀರಿನ ಕೊರತೆಯನ್ನು ನೀಗಿಸಲು ಮುಖ್ಯಮಂತ್ರಿ ಬೊಮ್ಮಾಯಿ ಅವರು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯ ಖಜಾಂಚಿ ಎಕೆಪಿ ನಾಗೇಶ್ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಗುರುವಾರ ಭೇಟಿ ಮಾಡಿ ಅಭಿನಂದಿಸಿ ಮನವಿ ಸಲ್ಲಿಸಿದ್ದಾರೆ.

ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದರಿಂದ ಇದು ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಡುವ ನಗರವಾಗಿದ್ದು ಅದ್ದರಿಂದ ದೇವನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಬೇಕು. ಜಿಲ್ಲಾ ಮಟ್ಟದ ಆಸ್ಪತ್ರೆ, ಜಿಲ್ಲಾ ಕ್ರೀಡಾಂಗಣ ಗ್ರಾಮಾಂತರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ವಸತಿ ಸೌಕರ್ಯ ಕಲ್ಪಿಸಿಕೊಡಬೇಕು ಈಗಾಗಲೆ ದೇವನಹಳ್ಳಿ ತಾಲೂಕಿಗೆ ಬಿಡುಗಡೆಯಾಗಿರುವ 120 ಕೋಟಿ ಅನುದಾನವನ್ನು ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಎಕೆಪಿ ನಾಗೇಶ್ ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ, ಹಾಗೂ ಬಿಜೆಪಿ ಮುಖಂಡರಾದ ಮಧುಸೂದನ್, ಅಂಬರೀಶ್ ಅಮರನಾರಯಣ ವೆಂಕಟೇಶ. ಇದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button