ಬೆಳಗಾವಿ
ಬೆಳಗಾವಿ ಜಿಲ್ಲೆಗೆ ಹರಿದು ಬರಲಿದೆ ಕೊಯ್ನಾ ಡ್ಯಾಮ್ ನೀರು; ಕಟ್ಟೆಚ್ಚರ ವಹಿಸುವಂತೆ ಸೂಚನೆ

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಾಗೂ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ನೀರು ಬಿಡಲಾಗಿದೆ.
ಕೊಯ್ನಾ ಡ್ಯಾಂ ನಿಂದ ಇಂದು ಬೆಳಿಗ್ಗೆ 8 ಗಂಟೆ ಹೊತ್ತಿಗೆ 10 ಸಾವಿರ ಕ್ಯುಸೆಕ್ ನೀರು ಹೊರ ಬಿಡಲಾಗಿದೆ. ಹತ್ತು ಗಂಟೆ 20 ಸಾವಿರ ಕ್ಯುಸೆಕ್ ನೀರನ್ನು ಬಿಡಲಾಗಿದೆ ಎಂದ ತಿಳಿದು ಬಂದಿದೆ.
ಕೊಯ್ನಾ ಜಲಾಶಯದಿಂದ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಸಂಕಷ್ಟ ಎದುರಾಗಿದೆ. ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚು ಹರಿದು ಬರಲಿದ್ದು, ಪ್ರವಾಹ ಸಂಭವಿಸುವ ಸಾಧ್ಯತೆಗಳಿವೆ. ಪ್ರವಾಹ ಎದುರಿಸಲು ಜಿಲ್ಲಾಡಳಿ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ




