ಬೆಳಗಾವಿ
ಹಿಡಕಲ್ ಗ್ರಾಮದಲ್ಲಿ ಪ್ರತಿಭಟನೆ, ಟೈರ್‌ಗೆ ಬೆಂಕಿ ಹಚ್ಚಿ ಬಸ್ ತಡೆದು ಆಕ್ರೋಶ

ಬೆಳಗಾವಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್‌ಗೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ಲ ಗ್ರಾಮದ ರಾಜ್ಯ ಹೆದ್ದಾರಿ 31ರಲ್ಲಿ ಬಸ್ ತಡೆದು ರಸ್ತೆಯ ಮೇಲೆ ಟೈರಗೆ ಬೆಂಕಿ ಹಚ್ಚಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷನೆ ಹಾಕಿ ಕೃಷಿ ಕಾಯ್ದೆಗಳನ್ನು ಹಿಮಪಡೆಯಲು ಒತ್ತಾಯಿಸಿ ಗ್ರಾಮಸ್ಥರು ಹಾಗೂ ರೈತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಇಂದು ಬಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಬಸ್ ಸಂಚಾರಕ್ಕೆ ಪ್ರಮುಖವಾಗಿ ವ್ಯತಯ ಉಂಟಾಗಿದ್ದು ಅನ್ಯ ಊರುಗಳಿಗೆ ತೆರಳುವ ಪ್ರಯಾಣಿಕರು ಬಸ್ ಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.




