ಬೆಳಗಾವಿ

ಮಂತ್ರಿಯಾಗಬೇಕಾದವರು ಕುಮಟಳ್ಳಿ, ಬಾಲಚಂದ್ರ: ಇಂಗಿತ ಹೊರಹಾಕಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ನನಗೆ ಮಂತ್ರಿ ಸ್ಥಾನದ ಮೇಲೆ ಆಸೆಯಿಲ್ಲ. ಬಿಜೆಪಿಯ ಭದ್ರತೆಗೆ ಏನೇನು ಮಾಡಬೇಕೋ ಎಲ್ಲವನ್ನೂ ಮಾಡುವೆ. ಮಂತ್ರಿಗಿರಿಗಾಗಿ ಮಹೇಶ್ ಕುಮಟಳ್ಳಿ, ಬಾಲಚಂದ್ರ ಜಾರಕಿಹೊಳಿ ಇದ್ದಾರೆ. ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ್ದೇ ನನಗೆ ಸಂತೋಷ ಉಂಟುಮಾಡಿದೆ ಎಂದು ಅಥಣಿಯಲ್ಲಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸಿ.ಡಿ ಪ್ರಕರಣ ಕೋರ್ಟ್​ನಲ್ಲಿದೆ. ಈಗ ಮಾತನಾಡುವುದು ಸೂಕ್ತವಲ್ಲ. ಬಿಜೆಪಿ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ಮಂತ್ರಿಗಿರಿಗಿಂತ ಸರ್ಕಾರ ಪತನಗೊಳಿಸಿದ್ದಕ್ಕೆ ಸಂತೋಷವಾಗುತ್ತಿದೆ. ಮಹೇಶ್ ಕುಮಟಳ್ಳಿಯವರಿಂಲೇ ನಾನು ನೀರಾವರಿ ಮಂತ್ರಿಯಾದೆ. ಮುಂದಿನ ದಿನಗಳಲ್ಲಿ ಮಹೇಶ್ ಕುಮಟಳ್ಳಿಗೆ ಒಳ್ಳೆಯ ಸ್ಥಾನ ಸಿಗುವ ವಿಶ್ವಾಸವಿದೆ ಎಂದಿದ್ದಾರೆ.

ಅಥಣಿಯಲ್ಲಿ ಮಹೇಶ್ ಕುಮಟಳ್ಳಿ ಪರ ಮಾತನಾಡಿರುವ ರಮೇಶ್ ಜಾರಕಿಹೊಳಿ, ತಮ್ಮ ಬಣದ ಸಚಿವ ಸ್ಥಾನದ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button