ಬೆಳಗಾವಿ

ಸಂಗೊಳ್ಳಿ ರಾಯಣ್ಣ ಸಮಾಧಿಗೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನೆರೆ ವೀಕ್ಷಣೆಗೆ ಆಗಮಿಸಿರುವ ಸಿದ್ದರಾಮಯ್ಯ ಸ್ವಾತಂತ್ರ್ಯ ಸೇನಾನಿಯ ಪುಣ್ಯಭೂಮಿಎಂದು ಕರೆಯಲ್ಪಡುವ ನಂದಗಡದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಸಮಾಧಿ ಸ್ಥಳಕ್ಕೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ

ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಕೂಡ ಪಡೆದ ವಿಪಕ್ಷ ನಾಯಕ. ರಾಯಣ್ಣ ಸ್ಮಾರಕ ಸೈನಿಕ ಶಾಲೆ, ಮ್ಯೂಸಿಯಂ ಹಾಗೂ ವಿವಿಧ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಶಾಸಕರಾದ ಡಾ. ಅಂಜಲಿ ನಿಂಬಾಳ್ಕರ್, ಲಕ್ಷ್ಮಿ ಹೆಬ್ಬಾಳಕರ್, ಮಾಜಿ ಶಾಸಕ ಅಶೋಕ್ ಪಟ್ಟಣ ಹಾಜರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button