ಬೆಳಗಾವಿ
ಹಿಂಡಲಗಾ ಜೈಲಿನಿಂದ ವಿನಯ್ ಕುಲಕರ್ಣಿ ಬಿಡುಗಡೆ; ಕಾರ್ಯಕರ್ತರ ಹರ್ಷ

ಬೆಳಗಾವಿ: ಮಾಜಿ ಬಿಜೆಪಿ ಜಿಲ್ಲಾಪಂಚಾಯತ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಕಳೆದ 9 ತಿಂಗಳಿನಿಂದ ಜೈಲಿನಲ್ಲಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಜಾಮೀನಿನ ಮೇಲೆ ಹಿಂಡಲಗಾ ಜೈಲಿನಿಂದ ಹೊರ ಬಂದಿದ್ದಾರೆ.
ವಿನಯ ಕುಲಕರ್ಣಿ ಸ್ವಾಗತಕ್ಕೆ ಆಗಮಿಸಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಕಾಂಗ್ರೆಸ್ ಶಾಸಕ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿನಯ್ ಕುಲಕರ್ಣಿ ಅವರ ಹಿರಿಯ ಸಹೋದರಿ ಸೇರ ವಿನಯ್ ಕುಲಕರ್ಣಿ ಹೊರ ಬರುತ್ತಲೇ ಹೂವಿನ ಹಾರ ಹಾಕಿ ಸ್ವಾಗತಿಸಿದರು.
ನೂರಾರು ಸಂಖ್ಯೆಯಲ್ಲಿ ಆಗಮಿಸಿದ ವಿನಯ್ ಕುಲಕರ್ಣಿ ಅವರ ಅಭಿಮಾನಿಗಳು ಸೇಬಿನ ಹಾರ ಹಾಕಿ, ಪಟಾಕಿ ಸಿಡಿಸುವ ಮೂಲಕ ಭರ್ಜರಿಯಾಗಿ ವಿನಯ ಕುಲಕರ್ಣಿ ಅವರ ಸ್ವಾಗತ ಮಾಡಿದರು




