Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ
ಬೆಂಗಳೂರಿನಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಘೋರ ದುರಂತ

ಬೆಂಗಳೂರು : ಬೆಂಗಳೂರಿನಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಬಾಲಕರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ನಂದಿನಿಲೇಔಟ್ ನಲ್ಲಿ ಪಾರಿವಾಳ ಹಿಡಿಯೋ ಭರದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ಸಂಜೆ 6.30 ರ ಸುಮಾರಿಗೆ ಅವಘಡ ಸಂಭವಿಸಿದ್ದು, ಚಂದ್ರು (10), ಸುಪ್ರೀತ್ (12) ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡಿರುವ ಚಂದ್ರು ಹಾಗೂ ಸುಪ್ರೀತ್ ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಚಿವ ಗೋಪಾಲಯ್ಯ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.
