ಬೈಕ್‌ಗೆ ಲಾರಿ ಡಿಕ್ಕಿ : ಸವಾರರಿಬ್ಬರು ಸ್ಥಳದಲ್ಲೇ ಸಾವು

ಮೈಸೂರು : ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿಹೊಡೆದ ಪರಿಣಾಮ ಬೈಕ್ ಸಾವರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಕೆ.ಆರ್.ನಗರ ತಾಲೂಕಿನ ಅರ್ಜುನ ಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು ಇಲವಾಲ ಸಮೀಪದ ಮೇಗಳಾಪುರ ಗ್ರಾಮದ ರವಿಶಂಕರ್(32) ಮತ್ತು ಮೈಸೂರಿನ ತ್ರಿಶಾ ಲೇಔಟ್ ನಿವಾಸಿ ಸುರೇಶ್ (32) ಮೃತ ದುರ್ದೈವಿಗಳಾಗಿದ್ದಾರೆ. ಸುರೇಶ್ ಅವರ ಪುತ್ರ ಮನ್ವಿತ್(8) ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಭಾನುವಾರ ಸಂಜೆ ಮೂವರು ಮೈಸೂರಿನಿಂದ ಹಾಸನದ ಕಡೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ತಾಲೂಕಿನ ಅರ್ಜುನಹಳ್ಳಿ ಬಳಿ ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಲಾರಿಯೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಬಳಿಕ ಬೈಕ್ ಸವಾರರ ಮೇಲೆ ಹರಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದಾರೆ. ಘಟನೆ ಸಂಭಂದ ಕೆಆರ್,ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




