Breaking NewsLatestಚಿಕ್ಕಮಗಳೂರುಜಿಲ್ಲಾ ಸುದ್ದಿರಾಜಕೀಯ
ಯಾರೂ ವಲಸೆ ಹೋಗದಿರಲು ಕಾಂಗ್ರೆಸ್ ನಾಟಕ: ಸಿ.ಟಿ.ರವಿ

ಚಿಕ್ಕಮಗಳೂರು: ಎಲ್ಲಾ ಚುನಾವಣೆಯಲ್ಲೂ ಕಾಂಗ್ರೆಸ್ ಸೋಲುತ್ತಾ ಬಂದಿದ್ದರೂ ಈಗ ಮುಖ್ಯಮಂತ್ರಿ ಸ್ಥಾನಕ್ಕಾಗಿ ಮತ್ತೆ ತಿರುಕನ ಕನಸು ಕಾಣುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟೀಕಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರವೇ ಇಲ್ಲ. ನೆಲಕ್ಕಚ್ಚಿಯಾಗಿದೆ. ಏನೂ ಇಲ್ಲದೆಯೂ ಇಷ್ಟೊಂದು ಕಚ್ಚಾಟ ನಡೆಸುತ್ತಿದ್ದಾರೆ. ಇನ್ನು ಅಧಿಕಾರದಲ್ಲಿ ಇದ್ದಿದ್ದರೆ ಇನ್ನೆಷ್ಟು ಕಚ್ಚಾಡುತ್ತಿದ್ದರು? ಬಹುಶಃ ಇನ್ನಷ್ಟು ಜನ ಕಾಂಗ್ರೆಸ್ನಿಂದ ವಲಸೆ ಹೋಗಬಾರದೆಂದು ಬೇಕಂತಲೇ ಈ ರೀತಿ ನಾಟಕೀಯ ಕಸರತ್ತು ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾಡಿರುವ ಟೀಕೆಗೆ ಅವರು ಪ್ರತಿಕ್ರಿಯಿಸಿ, ಅಧಿಕಾರಿಗಳ ವರ್ಗಾವಣೆ ಮಾಡುವುದು ನಾನಲ್ಲ. ಈ ಕುರಿತು ಅವರೊಂದಿಗೇ ಮಾತಾಡುತ್ತೇನೆ ಎಂದಷ್ಟೇ ಹೇಳಿದರು.
