ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ
ಧಾರವಾಡ : ಸಾರಿಗೆ ಬಸ್ – ಬೈಕ್ ಡಿಕ್ಕಿ : ಬೈಕ್ ಸವಾರ ಸಾವು

ಧಾರವಾಡ: ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದ ಹತ್ತಿರ ನಡೆದಿದೆ.
ಮುಳಮುತ್ತಲ ಗ್ರಾಮದ ಚನ್ನಪ್ಪ ಬಸಪ್ಪ ಬನವಣ್ಣವರ (21) ಸಾವನ್ನಪ್ಪಿದ ಯುವಕನೆಂದು ಗುರುತಿಸಲಾಗಿದೆ. ಮೃತ ಬೈಕ್ ಸವಾರನ್ನು ಧಾರವಾಡ ಯಾದವಾಡ ಗ್ರಾಮದ ಕಡೆಯಿಂದ ಲಕ್ಮಾಪುರ ಮರ್ಗವಾಗಿ ಧಾರವಾಡ ಕಡೆಗೆ ತೆರಳುತ್ತಿದ್ದು, ಧಾರವಾಡ ಕಡೆಯಿಂದ ಯಾದವಾಡ ಕಡೆಗೆ ಸಾರಿಗೆ ಸಂಸ್ಥೆ ಬರುವ ಸಂದರ್ಭದಲ್ಲಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಯುವಕ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ತೀವ್ರ ರಕ್ತ ಸ್ರಾವದಿಂದ ಸಾವಿಗೀಡಾಗಿದ್ದಾನೆ.
ಸ್ಥಳೀಯ ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಮೃತ ಬೈಕ್ ಸವಾರನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




