ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಸಾರಿಗೆ ಬಸ್‌ಗೆ ಕಾರು ಡಿಕ್ಕಿ; ವೈದ್ಯ ಸಾವು

ಧಾರವಾಡ: ವೇಗವಾಗಿ ಬಂದ ಕಾರು ಸಾರಿಗೆ ಸಂಸ್ಥೆಯ ಬಸ್ಸಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ‌ ಸರಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಸಾವಿಗೀಡಾದ ಘಟನೆ ಧಾರವಾಡ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

ನಗರದ ಹೊಸ ಬಸ್ ನಿಲ್ದಾಣ ಬಳಿ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ವೈದ್ಯ ಡಾ.ರಾಜಶೇಖರ ಪತ್ತಾರ ಸಾವನಪ್ಪಿದ್ದಾರೆ. ಧಾರವಾಡ ತಾಲೂಕಿನ ಗರಗ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ರಾಜಶೇಖರವರು ಸೇವೆ ಸಲ್ಲಿಸುತ್ತಿದ್ದರು.

ಗರಗ ಗ್ರಾಮದಿಂದ ಮರಳಿ ಬರುವ ಬರುವಾಗ ತಡ ರಾತ್ರಿ ದುರ್ಘಟನೆ ನಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಧಾರವಾಡ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಎಚ್ಓ ಸೇರಿದಂತೆ ಹಲವು ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button