ಜಿಲ್ಲಾ ಸುದ್ದಿರಾಜ್ಯಸುದ್ದಿಹುಬ್ಬಳ್ಳಿ - ಧಾರವಾಡ

ಹುಬ್ಬಳ್ಳಿಯಲ್ಲಿ ಕಾರಿಗೆ ಬೆಂಕಿ: ಕಿಡಿಗೇಡಿಗಳ ದುಷ್ಕೃತ್ಯ

ಹುಬ್ಬಳ್ಳಿ: ಮೈದಾನದಲ್ಲಿ ಪಾರ್ಕ್ ಮಾಡಿದ್ದ ಕಾರವೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿರುವ ಘಟನೆ, ವಾಣಿಜ್ಯ ನಗರಿ ಹುಬ್ಬಳ್ಳಿಯ ಗಿರಿಣಿಚಾಳದಲ್ಲಿ ನಡೆದಿದೆ.  ಸ್ಥಳೀಯ ನಿವಾಸಿ ಶ್ರೀಕಾಂತ್ ಬಾರಕೇರ ಎಂಬುಬವರಿಗೆ ಸೇರಿದ ಸ್ವಿಫ್ಟ್ ವಿಡಿಐ ಕಾರಿಗೆ ದುಷ್ಕರ್ಮಿಗಳ ತಂಡ ಬೆಂಕಿ ಬೆಂಕಿ ಹಚ್ಚಿ ಪರಾರಿಯಾಗಿದೆ. ಕಾರಿಗೆ ಬೆಂಕಿ ವ್ಯಾಪಿಸಿಕೊಂಡು ಹೊತ್ತಿ ಉರಿದಿದೆ.‌

ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿ ಬಂದ ಕಾರ್ ಮಾಲೀಕ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿ, ಕುಟುಂಬಸ್ಥರು ಮತ್ತು ಸ್ಥಳೀಯರ ಸಹಕಾರದೊಂದಿಗೆ ಬೆಂಕಿನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಲೀಕ ಶ್ರೀಕಾಂತ್ ಮಾತನಾಡಿ, ನಿತ್ಯ ಎರಡು ಕಾರುಗಳನ್ನು ಪಾರ್ಕಿಂಗ್ ಮಾಡಲಾಗುತಿತ್ತು. ಇಂದು ಕೆಲಸದ ನಿಮಿತ್ತ ಹೊರಗಡೆ ಹೋಗಬೇಕಾಗಿದ್ದರಿಂದ ಒಂದು ಕಾರ್ ಮನೆ ಮುಂದೆ ಮತ್ತೊಂದು ಸ್ವಿಫ್ಟ್ ಕಾರನ್ನು ಮೈದಾನದಲ್ಲಿ ಪಾರ್ಕಿಂಗ್ ಮಾಡಿದ್ದೆ. ಕಿಡಿಗೇಡಿಗಳು ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.  

Spread the love

Related Articles

Leave a Reply

Your email address will not be published. Required fields are marked *

Back to top button