Breaking NewsLatestಚಿಕ್ಕಮಗಳೂರುಜಿಲ್ಲಾ ಸುದ್ದಿ
Crime News: ಕಾರಿನ ಟೈರ್ ಸ್ಫೋಟ : ಇಬ್ಬರ ದುರ್ಮರಣ

ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರ ಸೇತುವೆ ಬಳಿ ನಡೆದೆ.
ಮೃತರನ್ನು ರಾಜಶೇಖರ್ ಹಾಗೂ ಮಣಿಕಂಠ ಎಂದು ಗುರುತಿಸಲಾಗಿದೆ. ಇನ್ನು ಚಾಲಕನ ನಿಯಂತ್ರಣ ತಪ್ಪಿ ಕಾರು ಕಮರಿಗೆ ಬಿದ್ದಿದ್ದು, ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯವಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ….
