ಜಿಲ್ಲಾ ಸುದ್ದಿಬೆಳಗಾವಿ
ಜನವರಿ 1 ರಿಂದ ರಾಜ್ಯದಲ್ಲಿ ಭತ್ತ, ರಾಗಿ, ಜೋಳ ಖರೀದಿ ಕೇಂದ್ರ ಆರಂಭ: ಸಚಿವ ಉಮೇಶ್ ಕತ್ತಿ

ಬೆಳಗಾವಿ: ಬರುವ ಜನವರಿ 1 ರಿಂದ ರಾಜ್ಯದಲ್ಲಿ ಭತ್ತ, ರಾಗಿ, ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು. ಇದರ ನೊಂದಣಿ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಜೆಡಿಎಸ್ ಸದಸ್ಯ ನಾಡಗೌಡ ಅವರ ಗಮನ ಸೆಳೆಯುವ ಸೂಚನೆ ವೇಳೆ ಮಾತನಾಡಿದ ಸಚಿವವರು, ತೊಗರಿ ಖರೀದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೆಂಬಲ ಬೆಲೆ ಯೋಜನೆ ಮಾರ್ಗ ಸೂಚಿಗಳನ್ವಯ ಪೂರ್ವ ಸಿದ್ಧತೆ ಮತ್ತು ರೈತರ ನೋಂದಣಿ ಕಾರ್ಯವನ್ನು ಸರ್ಕಾರದ ಆದೇಶದಂತೆ ಬರುವ ಜನವರಿ ಅಂತ್ಯದವರೆಗೆ ನೋಂದಾಯಿಸಿ, ತೊಗರಿ ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.
ವಿಜಯಪುರ ಜಿಲ್ಲೆಯಲ್ಲಿ ಈ ಬಾರಿ 11.90 ಲಕ್ಷ ಎಕರೆ ಪ್ರದೇಶದಲ್ಲಿ ತೊಗರಿ ಬೆಳೆಯಲಾಗಿದೆ ಎಂದೂ ಅವರು ತಿಳಿಸಿದರು.




