ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ
ಮಗಳ ಮದುವೆ ಸಮಾರಂಭದಲ್ಲಿ ಪತ್ನಿಯ ಜೊತೆಗೆ ಹೆಜ್ಜೆ ಹಾಕಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ : ವಾಣಿಜ್ಯ ನಗರಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಮೊದಲ ಪುತ್ರಿ ಅರ್ಪಿತಾ ಮದುವೆ ಸಮಾರಂಭ ನಡೆಯುತ್ತಿದ್ದು, ಮಗಳ ಮದುವೆ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದಂಪತಿಗಳು ಭರ್ಜರಿ ಸ್ಟೆಪ್ ಹಾಕಿದ್ದಾರೆ.
ಮದುವೆ ಸಮಾರಂಭದ ಮುಖ್ಯ ವೇದಿಕೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದಂಪತಿಗಳು ವರನಟ ಡಾ.ರಾಜ್ಕುಮಾರ್ ಹಾಡಿರುವ ಎಂದೆಂದೂ ನಿನ್ನನ್ನು ಮರೆತು ನಾ ಬದುಕಿರಲಾರೆ ಹಾಡಿಗೆ ಹೆಜ್ಜೆ ಹಾಕಿದ್ದು, ವಿಡಿಯೋ ಈಗ ವೈರಲ್ ಆಗಿದೆ.
ಇಂದು ನಡೆಯುವ ಅರಕ್ಷತೆ ಕಾರ್ಯಕ್ರಮದಲ್ಲಿ ಹಲವು ಕೇಂದ್ರ ಹಾಗೂ ರಾಜ್ಯ ಮಟ್ಟದ ನಾಯಕರು ಭಾಗಿಯಾಗಲಿದ್ದಾರೆ. ಇದರ ನಡುವೆ ಮಗಳ ಮದುವೆ ಕಾರ್ಯಕ್ರಮದಲ್ಲಿ ಜೋಶಿ ದಂಪತಿಗಳ ಡ್ಯಾನ್ಸ್ ಮಾಡಿದ್ದಾರೆ.




