ಉತ್ತರ ಕನ್ನಡಜಿಲ್ಲಾ ಸುದ್ದಿ

ಅನ್ನದಂಗಳದಲ್ಲಿ ದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ

ಕಾರವಾರ : ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಇಂದು ಅಂಕೋಲಾ ತಾಲೂಕಿನ ಡೋಂಗ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಗಡಿ ಗ್ರಾಮದಲ್ಲಿ ಆಯೋಜಿಸಿದ್ದ “ಅನ್ನದಂಗಳದಲ್ಲಿ ರೈತರೊಂದಿಗೆ ಸಂವಾದ” ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಸಚಿವರಾದ ಶಿವರಾಮ ಹೆಬ್ಬಾರ್ ಅವರು ಜಿಲ್ಲೆಯ ಕೃಷಿಕರೊಂದಿಗೆ ಸಂವಾದವನ್ನು ನಡೆಸಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯ ಬೆಳೆಗಳಿಗೆ ವಿಶೇಷ ಮಾರುಕಟ್ಟೆ ವ್ಯವಸ್ಥೆಯನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗುವುದು. ನಮ್ಮ ಹಿರಿಯರು ಕೃಷಿಯಲ್ಲಿ ಅಳವಡಿಸಿಕೊಂಡಿರುವ ಪದ್ಧತಿಯನ್ನು ಮರೆತ್ತಿದ್ದೇವೆ. ರಾಸಾಯನಿಕ ಕೃಷಿ ಪದ್ದತಿಯನ್ನು ಅನುಸರಿಸುವುದರಿಂದಾಗಿ ಇಂದಿನ ಜನಾಂಗವು ಹಲವಾರು ಕಾಯಿಲೆಗಳಿಗೆ ತುತ್ತಾಗುತ್ತಿದೆ. ಈ ಕಾರ್ಯಕ್ರಮದ ಮೂಲಕವಾಗಿ ಜಿಲ್ಲೆಯ ರೈತರು ಸಾವಯವ ಕೃಷಿ ಪದ್ದತಿಯನ್ನು ಅನುಸರಿಸಬೇಕು ಎಂದು ಸಚಿವ ಶಿವರಾಮ್ ಹೆಬ್ಬಾರ್ ಕೃಷಿಕರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಸಾವಯುವ ಕೃಷಿ ಮಿಷನ್ ಅಧ್ಯಕ್ಷ ಆನಂದ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ‌.ಎಸ್‌.ಪಾಟೀಲ್, ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಜಿಲ್ಲೆಯ ರೈತರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button