ಚಿಕ್ಕಮಗಳೂರು: ಪ್ರವಾಸ ಕೈಗೊಂಡಿದ್ದರೆ ರದ್ದು ಮಾಡಿ

ಚಿಕ್ಕಮಗಳೂರು: ಕೋವಿಡ್ ಮುನ್ನೆಚ್ಚರಿಕೆಗೆ ಅಗತ್ಯ ಕ್ರಮ ಕೈಗೊಂಡಿದ್ದು, ನೆರೆಯ ಕೇರಳ, ಮಹಾರಾಷ್ಟ್ರಗಳಲ್ಲಿ ಸೋಂಕಿತರು ಹೆಚ್ಚಾದ ಹಿನ್ನೆಲೆ ಜಿಲ್ಲಾಡಳಿತ ಅಲರ್ಟ್ ಅಗಿದೆ. ನೆಗೆಟಿವ್ ಇದ್ದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಯಾರೂ ಪ್ರವಾಸ ಕೈಗೊಳ್ಳಬೇಡಿ ಎಂದು ಸಲಹೆ ನೀಡಲಾಗಿದೆ.
ಹೊರರಾಜ್ಯಗಳಿಂದ ಬರುವ ಪ್ರವಾಸಿಗರು ಆರ್‌ಟಿಪಿಸಿಆರ್ ನೆಗೆಟಿವ್ ವರದಿ ತರವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಕೆಎನ್ ರಮೇಶ್ ತಿಳಿಸಿದ್ದಾರೆ.
ಜಿಲ್ಲೆಯ ಎನ್ಆರ್ ಪುರ, ಕೊಪ್ಪ ಭಾಗದಲ್ಲಿ ಕೇರಳದ ಸಂಪರ್ಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚು ಕಂಡು ಬರುತ್ತಿದೆ. ಸೋಂಕಿತರನ್ನು ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್ ಮಾಡಬಾರದು, ಬದಲಾಗಿ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಆದೇಶಿಸಲಾಗಿದೆ ಎಂದರು
ಕೊರೊನಾ ಸೋಂಕು ಹೆಚ್ಚಾಗಿ ಕಂಡುಬರುವ ಪ್ರದೇಶವನ್ನು ಮೈಕ್ರೋ ಕಂಟೈನ್ಮೆಂಟ್ ಹಾಗೂ ಕಂಟೈನ್ಮೆಂಟ್ ಝೋನ್ ಮಾಡಲಾಗುವುದು ಹಾಗೂ ಮನೆಗಳಿಗೆ ಸ್ಟಿಕ್ಕರ್ ಅಂಟಿಸಲು ತೀರ್ಮಾನಿಸಲಾಗಿದೆ.
ಹೋಂಸ್ಟೇ ರೆಸಾರ್ಟ್ ಗಳಲ್ಲಿ ಕಡ್ಡಾಯ ನಿಯಮ ಪಾಲಿಸಬೇಕು. ಅಂಗಡಿ-ಮುಂಗಟ್ಟುಗಳು, ಜನವಸತಿ ಪ್ರದೇಶಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆಗಬಾರದು. ಉಲ್ಲಂಘನೆ ಕಂಡುಬಂದರೆ ಬಂದ್ ಮಾಡಲು ಆದೇಶಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.




