ಚಿಕ್ಕಮಗಳೂರು

ಸಮಾಜ ಕಲ್ಯಾಣಾಧಿಕಾರಿ ಅಧಿಕಾರ ದುರ್ಬಳಕೆ ಆರೋಪ

ಚಿಕ್ಕಮಗಳೂರು: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಧಿಕಾರ ದುರ್ಬಳಕೆ ಮಾಡುತ್ತಿರುವ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಡಳಿತವನ್ನು ಆಗ್ರಹಿಸಿ ಮನವಿಪತ್ರ ಸಲ್ಲಿಸಲಾಯಿತು.

ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳ ವೇತನ ಮತ್ತು ಪ್ರೋತ್ಸಾಹಧನ ಮಂಜೂರು ಮಾಡಿಸುವಲ್ಲಿ ಸಮಾಜ ಕಲ್ಯಾಣಾಧಿಕಾರಿ ವಿಫಲವಾಗಿದ್ದಾರೆ. ಸೋಲಾರ್ ಲ್ಯಾಂಪ್ ಖರೀದಿಯಲ್ಲಿ ಟೆಂಡರ್ ನಿಯಮ ಉಲ್ಲಂಘಿಸಿ ಅವರಿಗೆ ಬೇಕಾದವರಿಗೆ ಕೊಡಿಸುವ ಮೂಲಕ ಅವ್ಯವಹಾರ ನಡೆಸಿದ್ದು, ಇದರ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ವಿಶೇಷ ಘಟಕದ ಯೋಜನೆಯ ವ್ಯವಸ್ಥಾಪಕರಲ್ಲಿ ಕೆಲಸ ಮಾಡಿಸದೇ ಜಾತಿನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದರು. ಅಪರ ಜಿಲ್ಲಾಧಿಕಾರಿ ರೂಪ ಅವರಿಗೆ ಮನವಿ ಸಲ್ಲಿಸಿದರು. ಡಿ.ಎಸ್.ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಶೂದ್ರ ಶ್ರೀನಿವಾಸ್, ಎಸ್.ಎನ್.ಮಹೇಂದ್ರಸ್ವಾಮಿ, ಗಣೇಶ್ ಇದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button