ಚಿಕ್ಕಮಗಳೂರು

ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಿ: ಡಾ.ಅಂಶುಮಂತ್ ಕರೆ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಿಂದಲೇ ಸಂಘಟಿಸಲು ಜಿಲ್ಲೆಯ ಎಲ್ಲಾ ಬ್ಲಾಕ್ ಹಾಗೂ ವಿವಿಧ ಘಟಕಗಳ ಅಧ್ಯಕ್ಷರು ಮುಂದಾಗಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ ಪಿ ಅಂಶುಮಂತ್ ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿವಿಧ ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಘಟಕಗಳ ಅಧ್ಯಕ್ಷರುಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯವನ್ನು ಹಾಗೂ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಿದ ಸಂದರ್ಭದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮನಮುಟ್ಟುವಂತೆ ಕಾರ್ಯಕರ್ತರು ತಿಳಿಸಬೇಕು ಎಂದರು.

ಬಿಎಲ್ಎ-2ಗಳ ನೇಮಕಾತಿ ಮತ್ತು ಪ್ರಾಜೆಕ್ಟ್ ಪ್ರಜಾಪ್ರತಿನಿಧಿಗಳ ವಿವರ ಹಾಗೂ ಇದೇ ತಿಂಗಳ 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನ, ವಿಧಾನ ಪರಿಷತ್ ಚುನಾವಣೆ ಹಾಗೂ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿದರು.

ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್ ಪಿ ಮಂಜೇಗೌಡ, ಹಿರೇಮಗಳೂರು ಪುಟ್ಟಸ್ವಾಮಿ, ರೂಬಿನ್ ಮೋಸಸ್, ಪಿ ತನೋಜ್ ಕುಮಾರ್, ಎಂ ಸಿ ಹೂವಪ್ಪ, ಪ್ರಕಾಶ್, ಮಹಮದ್ ನಯಾಝ್, ಯಶೋಧ, ಗುಣವಂತಿ, ವಿನಾಯಕ, ಮೋಹನ್, ಸಿಲ್ವೆಸ್ಟರ್, ಹೊನ್ನೇಶ್ ಇದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button