ಚಿಕ್ಕಮಗಳೂರು

ಅಭಿವೃದ್ಧಿ ಕಾರ್ಯ ಚುರುಕುಗೊಳಿಸಲು ಕ್ರಮ; ಸಿಇಒ ಜಿ.ಪ್ರಭು

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದ್ದು ಹೆಚ್ಚಿನ ಅಭಿವೃದ್ಧಿಗೆ ಸಧ್ಯದಲ್ಲೇ ಅನುದಾನ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಜಿಪಂ ಸಿಇಒ ಜಿ.ಪ್ರಭು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಲು, ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಬಾಕಿ ಉಳಿದಿರುವ ಯೋಜನೆಗಳ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಚರ್ಚಿಸಿ ಅನುಷ್ಠಾನಕ್ಕೆ ತರಲಾಗುವುದು. ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ 180 ಕೋಟಿ ವೆಚ್ಚದಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳಲಿದ್ದು, ಕ್ರಿಯಾಯೋಜನೆ ತಯಾರಾಗಿದೆ ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button