ಚಿಕ್ಕಮಗಳೂರು
ಚಿಕ್ಕಮಗಳೂರು ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ

ಚಿಕ್ಕಮಗಳೂರು: ನಗರಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಗೆದ್ದಿರುವ ಬಿಜೆಪಿ ಈಗ ಅಧ್ಯಕ್ಷ ಉಪಾಧ್ಯಕ್ಷರ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ.
ಅಧ್ಯಕ್ಷರಾಗಿ ವರಸಿದ್ಧಿ ವೇಣುಗೋಪಾಲ್ ಹಾಗೂ ಉಪಾಧ್ಯಕ್ಷರಾಗಿ ಉಮಾದೇವಿ ಕೃಷ್ಣಪ್ಪ ಅವರನ್ನು ಬಿಜೆಪಿಯ ಪದಾಧಿಕಾರಿಗಳ ಸಭೆಯಲ್ಲಿ ಅಂತಿಮಗೊಳಿಸಲಾಗಿದೆ.
18 ಸ್ಥಾನಗಳನ್ನು ಪಡೆದು ಸರಳ ಬಹುಮತ ದಾಖಲಿಸಿರುವ ಬಿಜೆಪಿ ಈಗಾಗಲೇ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿದ್ದು, ಇಂದು ನಡೆಯಲಿರುವ ಚುನಾವಣೆಯಲ್ಲಿ ಬಹುತೇಕ ಅವಿರೋಧ ಆಯ್ಕೆಯಾಗುವ ಸಾಧ್ಯತೆಯಿದೆ.




