ಚಿಕ್ಕಮಗಳೂರು

ತರೀಕೆರೆ ಪುರಸಭೆ ಕಾಂಗ್ರೆಸ್ ವಶ; ಬಿಜೆಪಿಗೆ ತೀವ್ರ ಮುಖಭಂಗ

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ಪುರಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.

ಪುರಸಭೆಯ ಒಟ್ಟು 23 ಸ್ಥಾನಗಳಲ್ಲಿ 15 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದ್ದು, ನಿರಾಯಾಸವಾಗಿ ಅಧಿಕಾರದ ಗದ್ದುಗೆಯನ್ನು ಹಿಡಿಯಲಿದೆ. ಬಿಜೆಪಿಯ 1 ಅಭ್ಯರ್ಥಿ ಮಾತ್ರ ಗೆಲುವು ಸಾಧಿಸಿದ್ದು ಉಳಿದವರಲ್ಲಿ 7 ಮಂದಿ ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ.

ಏಳು ಮಂದಿ ಪಕ್ಷೇತರರು ಕಾಂಗ್ರೆಸ್ಸಿಗೆ ಸೆಡ್ಡು ಹೊಡೆದು ನಿಂತಿದ್ದರು ಎನ್ನಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button