ಚಿಕ್ಕಮಗಳೂರುಜಿಲ್ಲಾ ಸುದ್ದಿ
‘ವೈದ್ಯರ ರಕ್ಷಣೆಗೆ ಕಾನೂನು ರೂಪಿಸಿ’

ಚಿಕ್ಕಮಗಳೂರು: ದೇಶದಲ್ಲಿ ವೈದ್ಯರ ರಕ್ಷಣೆಗೆ ಸರ್ಕಾರ ಸೂಕ್ತ ಕಾನೂನು ರೂಪಿಸುವ ಮೂಲಕ ಕರ್ತವ್ಯದಲ್ಲಿ ಹೆಚ್ಚು ಆತ್ಮವಿಶ್ವಾಸ ಮೂಡಿಸುವ ಕಾರ್ಯ ಮಾಡಬೇಕು ಎಂದು ಎಐಸಿಸಿ ರಾಜ್ಯ ಕಾರ್ಯದರ್ಶಿ ಸಂದೀಪ್ ಹೇಳಿದರು.
ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ಜಿಲ್ಲಾಸ್ಪತ್ರೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಜಿಲ್ಲಾಸ್ಪತ್ರೆಯ ವೈದ್ಯರನ್ನು ಅಭಿನಂದಿಸಿ ಮಾತನಾಡಿದರು.
ಕೆಪಿಸಿಸಿ ಪ್ರ.ಕಾರ್ಯದರ್ಶಿ ಎಂ.ಎಲ್.ಮೂರ್ತಿ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ನಯಾಝ್ ಅಹಮ್ಮದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮೋಹನ್ ಕುಮಾರ್, ಅಸಂಘಟಿತ ಕಾರ್ಮಿಕರ ಜಿಲ್ಲಾಧ್ಯಕ್ಷ ರಸೂಲ್ ಖಾನ್, ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕಿ ಡಾ.ಮೀರಾ, ವೈದ್ಯಾಧಿಕಾರಿಗಳಾದ ಚಂದ್ರಶೇಖರ್ ನಾಗರಾಜ್ ಮೊಹಮ್ಮದ್ ಸಾಲಿಯಾನ್,ಕಲ್ಪನಾ, ನಾಗೇಂದ್ರ ಇದ್ದರು




