ಚಿಕ್ಕಮಗಳೂರುರಾಜಕೀಯರಾಜ್ಯ

ಚುನಾವಣೆಯಲ್ಲಿ ಕಾಂಗ್ರೆಸ್ ಹಣಬಲ ಪ್ರದರ್ಶನ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಎಂಎಲ್ಸಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಣಬಲ ಪ್ರದರ್ಶಿಸಿದರೆ ಬಿಜೆಪಿ ಜನಬಲದೊಂದಿಗೆ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ಸಾಧನೆ ಶೂನ್ಯ. ನಮ್ಮ ಕೆಲಸಗಳಿಗೆ ಅವರು ಸರ್ಟಿಫಿಕೇಟ್ ಕೊಡುವ ಅಗತ್ಯವಿಲ್ಲ. ವಿಧಾನ ಪರಿಷತ್ ಸದಸ್ಯರಾಗಿದ್ದ ಅವಧಿಯಲ್ಲಿ ಗಾಯತ್ರಿ ಶಾಂತೇಗೌಡ ಅವರ ನಡೆ ನುಡಿ ಹೇಗಿತ್ತು ಎಂದು ಪ್ರಶ್ನಿಸಿ? ಕೆಲವೊಮ್ಮೆ ಅಭಿವೃದ್ಧಿ ಸಭೆಗಳಲ್ಲಿ ಮುಜುಗರ ಪಡುವ ಸನ್ನಿವೇಶ ಸೃಷ್ಟಿಯಾಗಿತ್ತು ಎಂದು ಆರೋಪಿಸಿದರು.

ಶೃಂಗೇರಿ ಕ್ಷೇತ್ರದ ಶಾಸಕರು ಕಮೀಷನ್, ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದಾರೆ. ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಇಂಥವರು ನಮ್ಮ ಅಭ್ಯರ್ಥಿ ಬಗ್ಗೆ ಟೀಕಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button