ಜಿಲ್ಲಾ ಸುದ್ದಿರಾಮನಗರ

ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಂದ ತರಗತಿ ಬಹಿಷ್ಕಾರ

ರಾಮನಗರ: ಚನ್ನಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಭದ್ರತೆಗೆ ಒತ್ತಾಯಿಸಿ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಸೇವಾ ಭದ್ರತೆಗಾಗಿ ಒತ್ತಾಯಿಸಿ ರಾಜ್ಯದಾದ್ಯಂತ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಬೆಂಬಲ ನೀಡಿ ನಗರದ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ನಂತರ ಪ್ರಾಂಶುಪಾಲ ವೆಂಕಟೇಶ್ ಗೆ ಮನವಿ ಪತ್ರ ನೀಡಿದರು.

ಪಿ.ಎಚ್.ಡಿ., ನೆಟ್, ಸ್ಲೆಟ್ ಪಡೆದು ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರೂ ಕೇವಲ ಅಲ್ಪ ವೇತನ ನೀಡುತ್ತಿರುವ ಸರ್ಕಾರದ ವಿರುದ್ಧ ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಅತಿಥಿ ಉಪನ್ಯಾಸಕರ ಪರವಾಗಿ ರಾಜೇಶ್ ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button