ಜಿಲ್ಲಾ ಸುದ್ದಿಮೈಸೂರು
ದಸರಾ ದೀಪಾಲಂಕಾರ ಕಣ್ತುಂಬಿಕೊಂಡ ಸಿಎಂ ಬೊಮ್ಮಾಯಿ ಕುಟುಂಬ

ಮೈಸೂರು: ಸಿಎಂ ಬಸವರಾಜ ಬೊಮ್ಮಾಯಿ ಕುಟುಂಬವು ದಸರಾ ದೀಪಾಲಂಕಾರವನ್ನು ಕಣ್ತುಂಬಿಕೊಂಡಿದೆ. ರಾತ್ರಿ 11 ಗಂಟೆ ವೇಳೆಗೆ ಸಿಎಂ ಕುಟುಂಬವು ಡಬಲ್ ಡೆಕ್ಕರ್ ಅಂಬಾರಿ ಬಸ್ ನಲ್ಲಿ ಪ್ರಮುಖ ರಸ್ತೆಗಳಲ್ಲಿ ಸಿಎಂ ಸಂಚಾರ ಮಾಡಿದರು.
ಮಳೆ ಬಂದ ಹಿನ್ನೆಲೆ ರಾತ್ರಿ 11 ಗಂಟೆಯಲ್ಲಿ ನಗರ ಪ್ರದಕ್ಷಿಣೆ ಹಾಕಿದ್ದಾರೆ. ಸಿಎಂಗೆ ಸಚಿವ ಸೋಮಶೇಖರ್, ಮತ್ತು ಶಾಸಕ ನಾಗೇಂದ್ರ ಸಾಥ್ ನೀಡಿದರು.
ಈಗಾಗಲೇ ವಿದ್ಯುತ್ ದೀಪಾಲಂಕಾರವನ್ನು ಜನ್ರ ಕೋರಿಕೆಯ ಮೇರೆಗೆ ಮುಂದಿನ 9 ದಿನಗಳ ಕಾಲ ವಿಸ್ತರಿಸಲಾಗಿದೆ.




