ಜಿಲ್ಲಾ ಸುದ್ದಿಬೆಳಗಾವಿ
Suresh Angadi Statue: ಸುರೇಶ ಅಂಗಡಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿ: ಮಾಜಿ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು.
ಅಂಗಡಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ದಿ.ಸುರೇಶ ಅಂಗಡಿ ಅವರ ಪ್ರತಿಮೆಯನ್ನು ಹಲವು ಗಣ್ಯರು, ಸ್ವಾಮೀಜಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿಗಳು ಅನಾವರಣ ಮಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್, ಸಂಸದೆ ಮಂಗಳಅ ಅಂಗಡಿ, ಸಚಿವರಾದ ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಭೈರತಿ ಬಸವರಾಜ್, ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್, ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ವಿಧಾನಪರಿಷತ್‍ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕ ಅನೀಲ್ ಬೆನಕೆ, ಅಭಯ್ ಪಾಟೀಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು




