Yatnal: ಸಿಎಂ ಬಸವರಾಜ ಬೊಮ್ಮಾಯಿ ಬಿಎಸ್ವೈ ರಬ್ಬರ್ ಸ್ಟಾಂಪ್ ಆಗಲ್ಲ: ಶಾಸಕ ಯತ್ನಾಳ್

ಧಾರವಾಡ : ನಮ್ಮ ಬೇಡಿಕೆ ಸಿಎಂ ಬದಲಾವಣೆ ಆಗಬೇಕು ಅಂತಾ ಇತ್ತು, ಈಗ ನಮ್ಮ ಪಕ್ಷದ ವರಿಷ್ಠರು ನಾಯಕತ್ವ ಬದಲಾವಣೆ ಮಾಡಿದ್ದಾರೆ. ಮುಖ್ಯಂಮತ್ರಿ ಬಸವರಾಜ ಬೊಮ್ಮಾಯಿ ಅವರು ಬಿಎಸ್ವೈ ನೆರಳು ಆಗಲ್ಲ. ಅವರಿಗೆ ಸ್ವಲ್ಪ ಸಮಯ ಕೊಡಿ ಎಂದು ಸಿಎಂ ಪರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬ್ಯಾಟ್ ಬೀಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟೈಯರ್ ಸುಟ್ಟು ಮಂತ್ರಿ ಆಗುವ ವ್ಯಕ್ತಿ ನಾನು ಅಲ್ಲ. ಹಿಂದು ವಿರೋಧಿ ಸಿಎಂ ಆಗಿದ್ದಾರೆ, ಆ ನೋವು ಕಾರ್ಯಕರ್ತರಲ್ಲೂ ಇದೆ. ಯಾರು ಹಿಂದೆ ಹೊಡಿಸಿದರು. ಯಾರು ಹೊಡೆತ ತಿಂದರೂ ಅನ್ನೋದು ಎಲ್ಲರಿಗೂ ಗೊತ್ತಿದೆ. ಪಕ್ಷಕ್ಕೆ ಹಾನಿ ಅಗಬಾರದು ಅಂತಾ ಹೈಕಮಾಂಡ್ ನಿರ್ಣಯ ಕೈಗೊಂಡಿದೆ. ಹಿಂದೆ ಎಷ್ಟೋ ಜನ ಕಮ್ಯುನಿಸ್ಟ್ ಇದ್ದವರು ಬಿಜೆಪಿಗೆ ಬಂದಿದ್ದಾರೆ. ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಹೋಗುವ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದರು.
ದೆಹಲಿಯಲ್ಲಿ ಶಾಸಕರು ಸಚಿವರಾಗಲು ಲಾಬಿ ವಿಚಾರ
ದೆಹಲಿಯಲ್ಲಿ ಶಾಸಕರು ಸಚಿವ ಸ್ಥಾನಕ್ಕೆ ಲಾಬಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಮಂತ್ರಿ ಸ್ಥಾನಕ್ಕೆ ಲಾಭಿ ನಡೆಸುವುದು ಸರಿಯಲ್ಲ.
ಸೂತ್ರಧಾರರೊಬ್ಬರು ಮಗು ಚುಟಿ. ತೊಟ್ಟಿಲು ತೂಗುತ್ತಿದ್ದಾರೆ. ಈಗ ಸೂತ್ರಧಾರರ ಶಿಷ್ಯರೇ ಜಗಳ ತಗೆಯುತ್ತಿದ್ದಾರೆ ಪರೋಕ್ಷವಾಗಿ ಬಿಎಸ್ ವೈ ವಿರುದ್ಧ ಕಿಡಿಕಾರಿದರು.
ಶೆಟ್ಟರ್ ಬಗ್ಗೆ ನನಗೆ ಅಪಾರ ಗೌರವ ಇದೆ. ಅವರ ತ್ಯಾಗಕ್ಕೆ ಅಭಿನಂದನೆ ಸಲ್ಲಿಸುವೆ. ಶೆಟ್ಟರ್ ತ್ಯಾಗದಿಂದ ಪ್ರತಿರೂಪವಾಗಿ ಬೊಮ್ಮಾಯಿ ಬಂದಿದ್ದಾರೆ. ನಮ್ಮನ್ನ ಮಂತ್ರಿನೂ ಮಾಡಲಿಲ್ಲ. ಮಂತ್ರಿ ಮಾಡದಿದ್ದರೂ ದುಃಖ ಇಲ್ಲ. ಶಾಸಕ ಅರವಿಂದ ಬೆಲ್ಲದ್ ಸಿಎಂ ಆಗುವ ಕನಸು ಕಂಡರು. ಅವರ ಹೆಗಲ ಮೇಲೆ ಯಾರೋ ಬಂದೂಕು ಇಟ್ಟರು. ನನಗೆ ಚೂಟಿದ್ರೆ ನಾನು ಅವರ ಕಪಾಳಕ್ಕೆ ಹೊಡೆಯುತ್ತಿದ್ದೆ. ನನಗೆ ಅನ್ಯಾಯ ಆಗಿಲ್ಲ ಎಂದರು.
ಬಿಎಸ್ ವೈ ವಿರುದ್ದ ನಾನು ಮಾತನಾಡಿದಕ್ಕೆ ಮಂತ್ರಿ ಸ್ಥಾನ ಸಿಗಲಿಲ್ಲ ಅನ್ನಬೇಡಿ. ನನ್ನ ವಿರೋಧ ಕಟ್ಟಿಕೊಂಡಿದ್ದಕ್ಕೆ ಬಿಎಸ್ ವೈ ಸಿಎಂ ಸ್ಥಾನ ಕಳೆದುಕೊಂಡರು. ಸೋಮಣ್ಣ ಬೇವಿನಮರದ ಅವರು ಸಿಎಂ ಬೊಮ್ಮಾಯಿ ವಿಶ್ವಾಸಘಾತಕ ಅಂತಾ ಹೇಳಿರುವುದು ಅವರ ವೈಯಕ್ತಿಕ ವಿಚಾರ. ಬೊಮ್ಮಾಯಿ ಅಧಿಕಾರ ಪೂರ್ಣಗೊಳಿಸಲಿ ಅಂತಾ ಚಾಮುಂಡೇಶ್ವರಿ ಬಳಿ ಬೇಡಿಕೊಳ್ಳುವೆ ನಾನು ಕನಸು ಕಂಡಿಲ್ಲ. ಆಸೆ ನಿರಾಸೆ ರಾಜಕಾರಣದಲ್ಲಿ ಸಹಜ. ಯತ್ನಾಳ ನಾಲಿಗೆ ಹರಿಬಿಟ್ಟದಕ್ಕೆ ಸ್ಥಾನ ತಪ್ಪಿಲ್ಲ. ನಾನು ನಾಲಿಗೆ ಹರಿಬಿಟ್ಟಿದಕ್ಕೆ ಸಿಎಂ ಬದಲಾದರು ಎಂದು ತಿಳಿಸಿದರು.
ವಿಜಯೇಂದ್ರ ಇನ್ನೂ ಸ್ವಲ್ಪ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕಾವೇರಿಯಲ್ಲಿನ ಕೆಲ ದೃಶ್ಯಗಳ ಬಗ್ಗೆ ನನಗೆ ಮಾಹಿತಿ ಇದೆ. ಇನ್ನೊಂದು ವಾರ ಕಾಯಿರಿ ಎಲ್ಲವನ್ನೂ ಹೇಳುವೆ. ನನ್ನ ಮಂತ್ರಿ ಸ್ಥಾನ ಸಿಗದಿದ್ದಾಗ ಸ್ವಾಮೀಜಿ ಹೇಳಿಕೆ ಕೊಡುವೆ ಅಂದ್ರು. ಆದರೆ ನಾನೇ ಬೇಡ ಅಂದೆ. ಬಿಎಸ್ ವೈ ಮೇಲಿನ ಒತ್ತಡದಿಂದ ಬೊಮ್ಮಾಯಿ ಸಿಎಂ ಆಗಿದ್ದಾರೆ. ಬೊಮ್ಮಾಯಿ ಅವರು ಬಿಎಸ್ ವೈ ನೆರಳು ಆಗಲ್ಲ. ಯಾಕಂದ್ರೆ ಆ ಕುರ್ಚಿಯ ಮಹಿಮೆ ಹಾಗಿರುತ್ತೆ. ಬೊಮ್ಮಾಯಿ, ಬಿಎಸ್ ವೈ ನೆರಳು ಆಗಿದ್ರೆ. ಬಿಎಸ್ ವೈ ನೇಮಕ ಮಾಡಿದ ಸಿಬ್ಬಂದಿಗಳೆ ಮುಂದುವರೆಯುತ್ತಿದ್ದರು ಎಂದು ಹೇಳಿದರು.




