ಸಂಕೇಶ್ವರ ಹೈಟೆಕ್ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಹೊಸ ಹೈಟೆಕ್ ಬಸ್ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದರು. ಅದರಂತೆ ಪುರಸಭೆಯ ನೂತನ ಆಡಳಿತ ಭವನಕ್ಕೆ ತೆರಳಿ ರಿಬ್ಬನ್ ಕತ್ತರಿಸುವ ಮೂಲಕ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಿದರು.
ಇಂದು ರಾತ್ರಿ ಸಂಕೇಶ್ವರ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು. ನಂತರ ಹುಕ್ಕೇರಿ ಶಾಸಕರು ಮತ್ತು ಅರಣ್ಯ ಹಾಗೂ ಆಹಾರ ಸಚಿವ ಉಮೇಶ ಕತ್ತಿ ಅವರ ಅದ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ವೇದಿಕೆಯಿಂದಲೆ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ, ಲೋಕೋಪಯೋಗಿ ಇಲಾಖೆಯ ಕಾಂಕ್ರೀಟ್ ರಸ್ತೆ, ಸಮಾಜ ಕಲ್ಯಾಣ ಇಲಾಖೆಯ ಡಾ.ಅಂಬೇಡ್ಕರ ಭವನ ಮತ್ತು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಏಕಕಾಲಕ್ಕೆ ಮುಖ್ಯಮಂತ್ರಿಗಳು ಉದ್ಘಾಟಿಸಿದರು.
ಈ ವೇಳೆ ಸಾರಿಗೆ ಸಚಿವ ಶ್ರೀರಾಮಲು, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಸಂಸದ ಅಣ್ಣಾಸಾಹೇಬ ಜೋಲ್ಲೆ, ವಿಧಾನಪರಿಷತ್‍ನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಆದಿಜಾಂಬವ ನಿಗಮ ಅಧ್ಯಕ್ಷ ದುರ್ಯೊಧನ ಐಹೋಳೆ, ಮಾಜಿ ಸಂಸದ ರಮೇಶ ಕತ್ತಿ, ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಪುರಸಭೆ ಅದ್ಯಕ್ಷೆ ಸೀಮಾ ಶ್ರೀಕಾಂತ ಹತನೂರೆ, ಉಪಾದ್ಯಕ್ಷ ಅಜೀತ ಕರಜಗಿ ಉಪಸ್ಥಿತರಿದ್ದರು. ನಂತರ ಪುರಸಭೆ ವತಿಯಿಂದ ಮುಖ್ಯಮಂತ್ರಿಗಳಿಗೆ ಸನ್ಮಾನ ಮಾಡಿ ಅಭಿನಂದಿಸಲಾಯಿತು.




