ಉತ್ತರ ಕನ್ನಡಜಿಲ್ಲಾ ಸುದ್ದಿ
ನಾಳೆ ಉತ್ತರಕನ್ನಡಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭೇಟಿ

ಬೆಳಗಾವಿ : ನಾಳೆ ಮಧ್ಯಾಹ್ನ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಲು ಯಡಿಯೂರಪ್ಪ ನಾಳೆ ಭೇಟಿ ನೀಡಲಿದ್ದಾರೆ.
ನಾಳೆ ಬೆಳಿಗ್ಗೆ ಬೆಂಗಳೂರಿನಲ್ಲಿ ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಂತರ ಅವರು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ಅಲ್ಲಿಗೆ ಹೋಗಿ ಪರಿಶೀಲನೆ ಮಾಡುತ್ತೇನೆ ಎಂದು ಸ್ವತಃ ಮುಖ್ಯಮಂತ್ರಿಗಳೇ ತಿಳಿಸಿದ್ದಾರೆ ಎನ್ನಲಾಗಿದೆ.
ಇಂದು ಸಂಜೆಯ ಹೊತ್ತಿಗೆ ಮುಖ್ಯಮಂತ್ರಿ ಬದಲಾವಣೆ ಸಂಬಂಧ ಹೈಕಮಾಂಡ್ ಸಂದೇಶ ಬರಲಿದೆ ಎಂದು ಕಾಯುತ್ತಿರುವ ಯಡಿಯೂರಪ್ಪ ನಾಳೆಯ ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಘೋಷಿಸುವ ಮೂಲಕ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.




