ಮಹಿಳೆಯೊಂದಿಗೆ ಅಸಭ್ಯ ವರ್ತನೆ ಪ್ರಕರಣ: ಮಾಜಿ ಕಾರ್ಪೊರೇಟರ್ ಬಂಧನ ಮಾಡಿದ ಪೊಲೀಸರು

ಧಾರವಾಡ: ಕಳೆದ ನಾಲ್ಕು ದಿನಗಳ ಹಿಂದೆ ಮಾಜಿ ಪಾಲಿಕೆ ಸದಸ್ಯರೊಬ್ಬರು ಮಹಿಳೆಯೊಂದಿಗೆ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ವಿದ್ಯಾಗಿರಿ ಠಾಣೆಯ ಪೊಲೀಸರು ಮಾಜಿ ಕಾರ್ಪೊರೇಟರ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಜೆಡಿಎಸ್ ಮುಖಂಡ ಹಾಗೂ ಮಾಜಿ ಪಾಲಿಕೆ ಸದಸ್ಯ ಶ್ರೀಕಾಂತ ಜಮನಾಳರನ್ನು ಕಳೆದ ದಿನ ತಡ ಸಂಜೆ ಧಾರವಾಡ ವಿದ್ಯಾಗಿರಿ ಪೊಲೀಸರು ಬಂಧನ ಮಾಡಿದ್ದಾರೆ. ಈ ಹಿಂದೆ ಇವರು ಜೆಡಿಎಸ್ ಪಕ್ಷದಿಂದ ಧಾರವಾಡ ಮೂರನೇ ವಾರ್ಡ್‌ನ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಧಾರವಾಡದ ಸತ್ತೂರಿನ ಎಸ್ ಡಿ ಎಮ್ ಡೆಂಟಲ್ ಆಸ್ಪತ್ರೆ ಬಳಿಯಲ್ಲಿ ಅನುಮತಿ ಅತ್ತಿಗೇರಿ ಎಂಬ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದರು. ಈ ಕುರಿತು ವಿಡಿಯೋ ಒಂದು ವೈರಲ್ ಆಗಿತ್ತು.
ಇದನ್ನೂ ಓದಿ : ಮಹಿಳೆಯೊಂದಿಗೆ ಅಸಭ್ಯ ವರ್ತನೆ ಹಿನ್ನೆಲೆ: ಮಾಜಿ ಕಾರ್ಪೊರೇಟರ್ ವಿರುದ್ಧ ಎಫ್‌ಐಆರ್
ಇನ್ನೂ ಶ್ರೀಕಾಂತ ಜಮನಾಳ ವಿರುದ್ಧ ಅನುಮತಿ ಅತಿಗೇರಿ ಮಹಿಳೆಯು ಧಾರವಾಡ ವಿದ್ಯಾಗಿರಿ ಠಾಣೆಯಲ್ಲಿ ಹಲ್ಲೆ, ಜೀವ ಬೇದರಿಕೆ ಆರೋಪ ಮಾಡಿ ಪ್ರಕರಣ ದಾಖಲು ಮಾಡಿದರು. ಮಹಿಳೆಯ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಈಗ ಮಾಜಿ ಪಾಲಿಕೆ ಸದಸ್ಯ ಶ್ರೀಕಾಂತ ಜಮನಾಳನನ್ನು ಬಂಧನ ಮಾಡಿದ್ದಾರೆ.




