ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಹುಬ್ಬಳ್ಳಿಯಲ್ಲಿ ಹಾಡಹಗಲೇ ಚಾಕು ಇರಿತ : ವ್ಯಕ್ತಿಗೆ ಗಂಭೀರ ಗಾಯ

ಹುಬ್ಬಳ್ಳಿ : ಹಾಡಹಗಲೇ ವ್ಯಕ್ತಿಯೊರ್ವನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಹಳೇ ಹುಬ್ಬಳ್ಳಿ ಹೆಗ್ಗೇರಿಯಲ್ಲಿ ನಡೆದಿದ್ದು, ಘಟನೆಯಿಂದ ಸ್ಥಳೀಯ ನಿವಾಸಿಗಳು ಬೆಚ್ಚಿಬಿದಿದ್ದಾರೆ.

ಹೆಗ್ಗೇರಿಯ ಆಸೀಫ್ ಎಂಬಾತ ಚಾಕು ಇರಿತಕ್ಕೆ ಒಳಗಾದ ವನು. ಈತನ ದೇಹದ ಮೂರು ಕಡೆ ಚಾಕುವಿನಿಂದ ಇರಿಯಲಾಗಿದೆ. ಸ್ಥಳೀಯರು ತಕ್ಷಣ ಈತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಬ್ಬರು ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಘಟನೆಗೆ ಕಾರಣವೇನು ಎಂಬುದು ಗೊತ್ತಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button