ಜಿಲ್ಲಾ ಸುದ್ದಿರಾಮನಗರ
ರಾಮನಗರ: ಮರಕಾಸ್ತ್ರಗಳಿಂದ ವ್ಯಕ್ತಿ ಕೊಲೆ

ರಾಮನಗರ: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನನ್ನು ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬಿ.ವಿ ಪಾಳ್ಯ ಗ್ರಾಮದಲ್ಲಿ ನಡೆದಿದೆ.
ಚನ್ನಪಟ್ಟಣ – ಸಾತನೂರು ಮುಖ್ಯ ರಸ್ತೆಯ ಪಕ್ಕದಲ್ಲೆ ಕೊಲೆ ನಡೆದಿದ್ದು, ಶಂಕರ್(30) ಕೊಲೆಯಾದ ಯುವಕ. ಹಳ್ಳಿ ಹಳ್ಳಿಗಳ ಮೇಲೆ ಈತ ಗಂಧದಕಡ್ಡಿ ವ್ಯಾಪಾರ ಮಾಡುತ್ತಿದ್ದ. ಈತನ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ.
ಸ್ಥಳಕ್ಕೆ ಅಕ್ಕೂರು ಪೊಲೀಸರು ಹಾಗೂ ಶ್ವಾನಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲೆಗೆ ಕಾರಣವೇನು, ಮಾಡಿದವರು ಯಾರು ಎನ್ನುವುದು ತಿಳಿದು ಬಂದಿಲ್ಲ. ಈ ಬಗ್ಗೆ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




