ಉತ್ತರ ಕನ್ನಡಜಿಲ್ಲಾ ಸುದ್ದಿ

PDO: ಬೈಕ್ ಅಪಘಾತ : ಹೊನ್ನಾವರ ಪಿಡಿಓ ಸಾವು

ಕಾರವಾರ : ಬೈಕ್ ಸ್ಕಿಡ್ ಆಗಿ ತಲೆಗೆ ಬಲವಾದ ಪೆಟ್ಟುಬಿದ್ದು, ಗ್ರಾಮ ಪಂಚಾಯತ್ ಪಿ‌ಡಿಓ ಒಬ್ಬರು ಕೊನೆಯುಸಿರೆಳೆದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ದುಂಡಕುಳಿ ಸಮೀಪ ಇಂದು ಮಧ್ಯಾಹ್ನ ಸಂಭವಿಸಿದೆ.

ಹೊನ್ನಾವರ ತಾಲೂಕಿನ ಇಡಗುಂಜಿ ಹಾಗೂ ಸಾಲ್ಕೋಡ್ ಗ್ರಾಮ ಪಂಚಾಯತ್ ಪಿಡಿಓ ಪ್ರಶಾಂತ ಕೃಷ್ಣ ಶೆಟ್ಟಿ (32) ಅಪಘಾತದಲ್ಲಿ ಕೊನೆಯುಸಿರೆಳೆದ ದುರ್ದೈವಿಯಾಗಿದ್ದಾರೆ. ಜಿಲ್ಲಾ ಕೇಂದ್ರ ಕಾರವಾರದಲ್ಲಿ ನಡೆದ ಕಂಪ್ಯೂಟರ್ ಪರೀಕ್ಷೆಗೆ ಹಾಜರಾಗಿ, ಬೈಕ್ ನಲ್ಲಿ ಹೊನ್ನಾವರದಿಂದ ಕಾರವಾರಕ್ಕೆ ಹೋಗಿ ತಿರುಗಿ ಬರುವಾಗ, ಕುಮಟಾ ತಾಲೂಕಿನ ದುಂಡಕುಳಿ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಇವರನ್ನು ಕುಮಟಾ ಆಸ್ಪತ್ರೆಗೆ ಸಾಗಿಸಲಾಗಿತ್ತು.

ಚಿಕಿತ್ಸೆಗೆ ಸ್ಪಂದಿಸದೆ ಪಿಡಿಓ ಪ್ರಶಾಂತ ಕೃಷ್ಣ ಶೆಟ್ಟಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button