Latestಕಲಬುರ್ಗಿಜಿಲ್ಲಾ ಸುದ್ದಿ
ಕಲಬುರ್ಗಿಯಲ್ಲಿ ರೈಲ್ವೆ ಹಳಿ ದಾಟುವಾಗ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಕಲಬುರ್ಗಿ : ರೈಲ್ವೆ ಹಳಿ ದಾಟುವ ಸಂದರ್ಭದಲ್ಲಿ ರೈಲು ಡಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿ (Engineering Student) ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಪಿಡಿಎ ಇಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ.
ಕಲಬುರ್ಗಿಯ (Kalburgi) ಕೆಎಚ್ ಬಿ ಕಾಲೋನಿ ನಿವಾಸಿ ಮಲ್ಲಿಕಾರ್ಜುನ ಮಂಟಾಳೆ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ದುರ್ದೈವಿ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿ, ಇಂದು ಹಳಿ ದಾಟುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ವಾಡಿ ರೈಲ್ವೆ ಪೊಲೀಸರು ಭೇಟಿನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ವಾಡಿ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



