ಜಿಲ್ಲಾ ಸುದ್ದಿಮೈಸೂರು

ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಪುತ್ರ ಆತ್ಮಹತ್ಯೆಗೆ ಶರಣು

ಮೈಸೂರು ; ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿಯವರ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನಗರದ ಮರಟಿಕ್ಯಾತನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಪುತ್ರ ಪ್ರದೀಪ್ (32) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಪಾರ್ಟ್‌ಮೆಂಟ್​​ನ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರದೀಪ್​​ ತಂದೆ ಬೆಳವಾಡಿ ಶಿವಮೂರ್ತಿ ಜಿಲ್ಲಾ ಜೆಡಿಎಸ್ ಖಜಾಂಚಿಯಾಗಿದ್ದು, ತಾಯಿ ಭಾಗ್ಯ ಶಿವಮೂರ್ತಿ ಮೈಸೂರು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾಗಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಭಂದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button