ಜಿಲ್ಲಾ ಸುದ್ದಿಮೈಸೂರು

ಅತ್ತಿಗೆ ಮಗಳ ಮೇಲೆ ಅತ್ಯಾಚಾರ ನಡೆಸಿ ಪೊಲೀಸರಿಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

ಮೈಸೂರು: ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಪೊಲೀಸರಿಗೆ ಹೆದರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನಂಜನಗೂಡು ತಾಲ್ಲೂಕಿನ ಹಾರೋಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪತ್ನಿಯನ್ನು ಹೆರಿಗೆಗೆ ಕಳುಹಿಸಿದ ಆರೋಪಿ ಪತಿ, ಅತ್ತಿಗೆಯ (ಹೆಂಡತಿಯ ಅಕ್ಕ) ಮಗಳ (14) ಮೇಲೆ ಅತ್ಯಾಚಾರ ಎಸಗಿದ್ದಾನೆ.

ಆ ಬಳಿಕ ಪೊಲೀಸರಿಗೆ ಹೆದರಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸಂಬಂಧದಲ್ಲಿ ತಂದೆ ಸಮನಾದ ಪ್ರದೀಪ್ (26) ಅತ್ಯಾಚಾರ ಆರೋಪಿಯಾಗಿದ್ದು, ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಹಾರೋಪುರ ಗ್ರಾಮದಲ್ಲಿ ಚಿಲ್ಲರೆ ಅಂಗಡಿ ನಡೆಸುತ್ತಿರುವ ಪ್ರದೀಪ್, ಹೆಂಡತಿಯನ್ನು ತವರು ಮನೆಗೆ ಹೆರಿಗೆಗಾಗಿ ಕಳುಹಿಸಿದ್ದ. ಈ ಸಂದರ್ಭದಲ್ಲಿ ಹೆಂಡತಿಯ ಅಕ್ಕನ ಮಗಳನ್ನು ತಬ್ಬಿಕೊಂಡು ಫೋಟೋ ತೆಗೆದುಕೊಂಡಿದ್ದು ಬೇರೆಯವರಿಗೆ ಆ ಫೋಟೋ ತೋರಿಸುವುದಾಗಿ ಬ್ಲಾಕ್‌ಮೇಲ್ ಮಾಡಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ನಿರಂತರವಾಗಿ ಅತ್ಯಾಚಾರ ನಡೆಸಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಾಳೆ.

ಪ್ರದೀಪ್ ತಾನು ನಡೆಸಿದ ಕೃತ್ಯ ಮುಚ್ಚಿಹಾಕಲು ಖಾಸಗಿ ಲ್ಯಾಬ್‌ನಲ್ಲಿ ಬಾಲಕಿಗೆ ಗರ್ಭಪಾತ ಮಾಡಿಸಲು ಮುಂದಾಗಿದ್ದಾನೆ. ಈ ವೇಳೆ ಲ್ಯಾಬ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗುತ್ತಿದ್ದಂತೆ ಪ್ರದೀಪ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಅಪ್ರಾಪ್ತೆಯನ್ನು ಪುನರ್ವಸತಿ ಕೇಂದ್ರದಲ್ಲಿ ಬಿಟ್ಟಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button