ದಕ್ಷಿಣ ಕನ್ನಡ

ಝೀಕಾ ಹತೋಟಿಗೆ ಮಂಗಳೂರಿನಲ್ಲಿ ಸುತ್ತೋಲೆ

ಮಂಗಳೂರು: ದ.ಕ.ಜಿಲ್ಲೆಯ ಅಂಚಿನಲ್ಲಿ ಗಡಿ ಹೊಂದಿರುವ ನೆರೆರಾಜ್ಯ ಕೇರಳದಲ್ಲಿ ಝೀಕಾ ವೈರಸ್ ಪ್ರಕರಣಗಳ ಸಂಖ್ಯೆ ದಿನಗಳೆದಂತೆ ಹೆಚ್ಚಾಗುತ್ತಿರುವ ಪರಿಣಾಮ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ದ.ಕ. ಜಿಲ್ಲಾ ಪಂಚಾಯಿತಿಯಿಂದ ಪ್ರತೀ ಗ್ರಾಮ ಪಂಚಾಯಿತಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.

ಕಾಸರಗೋಡು-ಮಂಗಳೂರು ಮಾರ್ಗದಲ್ಲಿ ಜನಸಂಚಾರ ಅಧಿಕವಾಗಿರುವುದರಿಂದ ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಈಡಿಸ್ ಸೊಳ್ಳೆಯಿಂದ ಹರಡುವ ಝೀಕಾ ವೈರಸ್ ಸಾಂಕ್ರಾಮಿಕವಾಗಿದ್ದು, ಯಾರಿಗಾದರೂ ಜ್ವರ ಬಂದಾಗ ನಿರ್ಲಕ್ಷ್ಯ ವಹಿಸಬೇಡಿ. ತಕ್ಷಣ ಸಮೀಪದ ಆಸ್ಪತ್ರೆಗೆ ಧಾವಿಸಿ ಪರೀಕ್ಷಿಸಿಕೊಳ್ಳಬೇಕು. ನಮ್ಮ ಸುತ್ತಮುತ್ತಲ ಪರಿಸರದಲ್ಲಿ ಸ್ವಚ್ಛತೆ ಅಗತ್ಯವಾಗಿದ್ದು, ಸಮರ್ಪಕ ತ್ಯಾಜ್ಯ ವಿಲೇವಾರಿ ಆಗಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ಸ್ವಚ್ಛತೆ ಕಾಪಾಡಲು ಪ್ರತೀ ಗ್ರಾಪಂ ವ್ಯಾಪ್ತಿಗಳಲ್ಲಿ ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸಬೇಕು. ಸೂಚನೆ ಪಾಲಿಸದೆ ನಿರ್ಲಕ್ಷ್ಯ ವಹಿಸುವವರಿಗೆ ದಂಡ ವಿಧಿಸಬೇಕು ಎಂದು ಸಿಇಒ ಡಾ.ಕುಮಾರ್ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button