ದಕ್ಷಿಣ ಕನ್ನಡ
ಕೋವಿಡ್: ದಕ್ಷಿಣ ಕನ್ನಡದಲ್ಲಿ ತೀವ್ರ ಕಟ್ಟೆಚ್ಚರ

ಮಂಗಳೂರು: ಕೇರಳದಲ್ಲಿ ಕೋವಿಡ್ ಪಾಸಿಟಿವಿಟಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಎಲ್ಲಾ ಗಡಿಭಾಗದಲ್ಲಿ ತಪಾಸಣೆ ತೀವ್ರಗೊಳಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ತಿಳಿಸಿದ್ದಾರೆ.
ಮಂಗಳೂರು-ಕಾಸರಗೋಡು ಮಾರ್ಗದ ತಲಪಾಡಿ ಟೋಲ್ ಬಳಿ ಭೇಟಿನೀಡಿದ್ದ ಅವರು, ವಿವಿಧ ಅಧಿಕಾರಿಗಳಿಗೆ ಮಾರ್ಗಸೂಚಿಗಳ ಮಾಹಿತಿ ತಿಳಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಗಡಿದಾಟುವ ಬಸ್ ಪ್ರಯಾಣಿಕರಿಗೆ 15 ದಿನಕ್ಕೊಮ್ಮೆ ನೆಗೆಟಿವ್ ವರದಿ ಕಡ್ಡಾಯ. ಲಸಿಕೆಯ ಮೊದಲ ಡೋಸ್ ಲಸಿಕೆ ಪಡೆದಿದ್ದರೆ ಸಂಚರಿಸಲು ಅವಕಾಶವಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸೂಚನೆ ಹಿನ್ನಲೆಯಲ್ಲಿ ಎಲ್ಲೆಡೆ ಕಠಿಣ ಕ್ರಮ ಜರುಗಿಸಲಾಗುತ್ತಿದೆ ಎಂದು ತಿಳಿಸಿದರು.




