ದಾವಣಗೆರೆ

ಹರಿಹರ ನಗರಸಭೆ ಉಪಚುನಾವಣೆಯಲ್ಲಿ ಜೆಡಿಎಸ್ ಗೆಲುವು

ದಾವಣಗೆರೆ: ಜಿಲ್ಲೆ ಹರಿಹರ ನಗರಸಭೆಯ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಭಂಗ ಅನುಭವಿಸಿವೆ.

ಹರಿಹರ ನಗರಸಭೆಯ 14 ನೇ ವಾರ್ಡ್ ನ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ 370 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಜಯಭೇರಿ ಬಾರಿಸಿದ್ದಾರೆ.

ಕಾಂಗ್ರೆಸ್ ಸದಸ್ಯ ಮೆಹಬೂಬ್ ಬಾಷಾ ನಿಧನದಿಂದ ತೆರವಾಗಿದ್ದ ಈ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ ಅಲ್ತಾಫ್ ಗೆಲುವಿನ ನಗೆ ಬೀರುತ್ತಿದ್ದಂತೆಯೇ, ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಮೂಲಕ ಹರಿಹರ ಕಾಂಗ್ರೆಸ್ ಶಾಸಕ ರಾಮಪ್ಪರಿಗೆ ಮುಖಭಂಗವಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button