ದಾವಣಗೆರೆ

ಕಿಚ್ಚ ಸುದೀಪ್ ಬರ್ತ್ ಡೇ ಸಿಂಪಲ್ ಆಗಿ ಆಚರಣೆ

ದಾವಣಗೆರೆ: ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರವರ ಹುಟ್ಟು ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಜಗಳೂರಿನಲ್ಲಿ ಶಾಸಕ ಎಸ್. ವಿ. ರಾಮಚಂದ್ರಪ್ಪರವರ ಅಭಿಮಾನಿ ಬಳಗದ ವತಿಯಿಂದ ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಣೆ ಮಾಡಲಾಯಿತು. ಅಭಿಮಾನಿಗಳು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದೆವು. ಕೊರೊನಾ ಮೂರನೇ ಅಲೆ ಭೀತಿ ಇರುವ ಕಾರಣ ಸರಳವಾಗಿ ಆಚರಿಸುತ್ತಿದ್ದೇವೆ. ಸುದೀಪ್ ಅವರಿಗೆ ದೇವರು ಆಯುಷ್ಯ, ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುವುದಾಗಿ ಅಭಿಮಾನಿಗಳು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಜಗಳೂರು ತಾಲೂಕಿನ ಯುವ ಬಿಜೆಪಿ ಯುವ ಮುಖಂಡ ಬಿಸ್ತುವಳ್ಳಿ ಬಾಬು, ಉಮಾಪತಿ ಅಂಜನಪ್ಪ, ಊರಿನ ಅಪಾರ ಕಿಚ್ಚ ಸುದೀಪ್ ಆಭಿಮಾನಿಗಳು, ಗ್ರಾಮಸ್ಥರು ಯುವಕರು ಸೇರಿ ತನ್ನ ನೆಚ್ಚಿನ ಚಿತ್ರ ನಟರಾದ ಕಿಚ್ಚ ಸುದೀಪ್ ರವರ ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಕಟ್ ಮಾಡಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

Spread the love

Related Articles

Leave a Reply

Your email address will not be published. Required fields are marked *

Back to top button