ಜಿಲ್ಲಾ ಸುದ್ದಿಮೈಸೂರು

Deer: ಬೀದಿ ನಾಯಿಗಳ ದಾಳಿಗೆ ಜಿಂಕೆ ಬಲಿ

ಮೈಸೂರು: ಜಿಂಕೆಯೊಂದು ಬೀದಿನಾಯಿಗಳ ದಾಳಿಗೆ ಒಳಗಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದ ಹೊರವಲಯದ ಜಮೀನಿನಲ್ಲಿ ಜಿಂಕೆ ಮೇಲೆ ನಾಯಿಗಳು ದಾಳಿ ಮಾಡಿವೆ.

ಆಹಾರ ಅರಸಿ ಅರಣ್ಯದಿಂದ ಜಿಂಕೆಯು ನಾಡಿಗೆ ಲಗ್ಗೆ ಇಟ್ಟಿದೆ. ಈ ವೇಳೆ ಜಿಂಕೆ ಮೇಲೆ ನಾಯಿಗಳು ದಾಳಿ ಮಾಡಿವೆ. ಏಕಕಾಲಕ್ಕೆ ನಾಯಿಗಳ ಗುಂಪು ದಾಳಿ ಮಾಡಿದೆ.
ಜಿಂಕೆಯನ್ನ ಕೊಂದು ತಿನ್ನುತ್ತಿರುವ ದೃಶ್ಯವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ಕ್ಯಾಮರಾದಿಂದ ಸೆರೆ ಹಿಡಿದಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಇತ್ತ ಗಮನಹರಿಸಬೇಕಿದೆ.

Spread the love

Related Articles

Leave a Reply

Your email address will not be published. Required fields are marked *

Back to top button