ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

Farmer Suicide: ಧಾರವಾಡದಲ್ಲಿ ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ರೈತ

ಧಾರವಾಡ: ಸಾಲಬಾಧೆಯಿಂದ ಬೇಸತ್ತು ರೈತನೋರ್ವ ತನ್ನ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ.

ರಾಮಚಂದ್ರಪ್ಪ ವಾಲೀಕಾರ ಎಂಬ ರೈತನೇ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಕೃಷಿ ಚಟುವಟಿಕೆಗಳಿಗಾಗಿ ರಾಮಚಂದ್ರಪ್ಪ ಬ್ಯಾಂಕ್ ಸೇರಿ ಹಲವು ಕಡೆಗಳಲ್ಲಿ ಸಾಲ ಮಾಡಿಕೊಂಡಿದ್ದನು ಎಂದು ಹೇಳಲಾಗುತ್ತಿದೆ.

ರೈತನ ಆತ್ಮಹತ್ಯೆ ಕುರಿತು ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಗರಗ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ. ರೈತನ ಮೃತ ದೇಹವನ್ನು ಸ್ಥಳೀಯರ ಸಹಾಯದೊಂಗೆ ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button