ಉತ್ತರ ಕನ್ನಡಜಿಲ್ಲಾ ಸುದ್ದಿ
ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಾರವಾರ : ಸಾಲಬಾಧೆ ಮತ್ತು ಅನಾರೋಗ್ಯದಿಂದ ಮನನೊಂದ ರೈತನೊಬ್ಬ ತನ್ನ ಮನೆಯ ಪಕ್ಕದ ಅರಣ್ಯದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹಿತ್ಲಳ್ಳಿ ಗ್ರಾ.ಪಂ. ವ್ಯಾಪ್ತಿಯ ಹಲದೇವರ ಜಡ್ಡಿಯಲ್ಲಿ ನಡೆದಿದೆ.
ಈತ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದೆ. ಗಣೇಶ ಕುಣಬಿ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಈತ ಸಾಲವನ್ನು ಮಾಡಿಕೊಂಡಿದ್ದನಲ್ಲದೇ ಅನಾರೋಗ್ಯದಿಂದ ಬಳಲುತ್ತಿದ್ದ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ಧಿ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




