ಮೈಸೂರಿನಲ್ಲಿ 9 ವರ್ಷದ ಬಾಲಕನಿಗೆ ಓಮಿಕ್ರಾನ್ ಸೋಂಕು ಧೃಢ

ಮೈಸೂರು : ಮೈಸೂರಿನಲ್ಲಿ ಒಂಬತ್ತು ವರ್ಷದ ಬಾಲಕನಿಗೆ ಓಮಿಕ್ರಾನ್ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ವಿದೇಶದಿಂದ ಆಗಮಿಸಿದ್ದ 9 ವರ್ಷದ ಮಗುವಿನಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಬಾಲಕನಲ್ಲಿ ಓಮಿಕ್ರಾನ್ ಪತ್ತೆಯಾಗಿರುವುದನ್ನು ಧೃಢಪಡಿಸಿದೆ. ಸದ್ಯ ಮಗುವಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಮಗುವನ್ನು ಪ್ರತ್ಯೇಕವಾಗಿ ಇರಿಸಲಾಗಿದ್ದು, ಪ್ರಾಥಮಿಕ, ದ್ವಿತೀಯ ಸಂಪರ್ಕಿತರ ತಪಾಸಣೆ ಮಾಡಲಾಗುತ್ತಿದೆ ಎಂದು ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 2 ರಂದು ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಒಮಿಕ್ರಾನ್ ಕೇಸ್ ಪತ್ತೆಯಾಗಿತ್ತು. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ವ್ಯಕ್ತಿಗಳಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಒಮಿಕ್ರಾನ್ ಕಂಡು ಬಂದಿತ್ತು. ಒಮಿಕ್ರಾನ್ ಪ್ರಕರಣ ಪತ್ತೆಯಾಗಿರುವುದನ್ನು ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿತ್ತು. ಮೈಸೂರು ಜಿಲ್ಲೆಯಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯ ಜನ್ರಲ್ಲಿ ಆತಂಕ ಉಂಟಾಗಿದೆ.




